(ನ್ಯೂಸ್ ಕಡಬ) newskadaba.com,ಫೆ,02 ಬೆಂಗಳೂರು: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಬಹುತೇಕ ಎರಡು ಸಾವಿರ ರೂ ತಗ್ಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆ ಆಗಿದೆ. ಗ್ರಾಮ್ಗೆ 50 ರೂ ಕಡಿಮೆಗೊಂಡು 300 ರೂಗೆ ಇಳಿದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,51,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 30,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,38,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 30,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ…………….
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 2ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,153 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,890 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,365 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ








