(ನ್ಯೂಸ್ ಕಡಬ) newskadaba.com,ಫೆ.06 ಬೆಂಗಳೂರು: ಸಾರ್ವಜನಿಕ ವಲಯದ ಭಾರತದ ಅತಿದೊಡ್ಡ ಬ್ಯಾಂಕ್ ಎಸ್‌ಬಿಐ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಮತ್ತೊಮ್ಮೆ ಅರ್ಜಿ ಸರ್ಕಲ್ ಬೇಸ್ಡ್ ಆಫೀಸರ್ಸ್ ಹುದ್ದೆ ಇದಾಗಿದ್ದು (Bank Jobs), ಕರ್ನಾಟಕದಲ್ಲಿಯೇ 211 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆಬ್ರವರಿ 18.
ಸರ್ಕಲ್ ಬೇಸ್ಡ್ ಆಫೀಸರ್ಸ್ ಹುದ್ದೆ ಇದಾಗಿದ್ದು, ರೆಗ್ಯುಲರ್ 2,050 ಮತ್ತು ಬ್ಯಾಕ್‌ಲಾಗ್ 223 ಹುದ್ದೆಗಳಿದೆ. ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಬಹುದು. ವೈದ್ಯಕೀಯ, ಎಂಜಿನಿಯರಿಂಗ್, ಸಿಎ, ಕಾಸ್ಟ್ ಅಕೌಂಟೆಂಟ್ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು. ಗಮನಿಸಿ, ನಿರ್ದಿಷ್ಟ ಸರ್ಕಲ್‌ನ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ತಿಳಿದಿರಬೇಕು. ಅಂದರೆ ಸ್ಥಳೀಯ ಭಾಷೆ ಓದುವುದು, ಬರೆಯುವುದು ಮತ್ತು ಮಾತನಾಡಲು ಬರಬೇಕು. ಜತೆಗೆ 2 ವರ್ಷಗಳ ಕಾರ್ಯಾನುಭವ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ.
ವಯೋಮಿತಿ
ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷ, ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ.ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇನ್ನು ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು.








