ಮಾ.11ರಿಂದ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌ : ಎಚ್ಚರ



(ನ್ಯೂಸ್‌ ಕಡಬ) newskadaba.com,ಫೆ.24: ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರು ಮಾರ್ಚ್ 11 ರಿಂದ 15 ರವರೆಗೆ ಹೊರರೋಗಿಗಳ (ಒಪಿಡಿ) ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ…





ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್‌ ಎಂ.ಮೇಟಿ ಅವರು, ರಾಜ್ಯ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 16 ರಿಂದ ಆರೋಗ್ಯ ಇಲಾಖೆಯ ಎಲ್ಲಾ ವೈದ್ಯರು, ಅಧಿಕಾರಿ-ನೌಕರರು ಕರ್ತವ್ಯಕ್ಕೆ ಅನಿರ್ದಿಷ್ಟಾವಧಿವರೆಗೆ ಗೈರಾಗುವ ಮೂಲಕ ಮುಷ್ಕರ ಮುಂದುವರೆಸುತ್ತೇವೆ ಎಂದು ತಿಳಿಸಿದರು.






ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿದ್ದು ಸಮರ್ಪಕವಾಗಿ ಔಷಧ ಸರಬರಾಜು ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕು. ಆದರೆ, ಸರ್ಕಾರಿ ಆದೇಶ ಉಲ್ಲಂಘಿಸಿ 1973ರಿಂದ ಇಲ್ಲಿಯವರೆಗೆ ಆರೋಗ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿಲ್ಲ. ಈ ಬಗ್ಗೆ ಶೀಘ್ರ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.

error: Content is protected !!
Scroll to Top