ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ



(ನ್ಯೂಸ್‌ ಕಡಬ) newskadaba.com,ಫೆ.27 : ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ರುವ ಘಟನೆ ಥಣಿಸಂದ್ರದ ಅಮರ ಜ್ಯೋತಿ ಲೇಔಟ್ ನಲ್ಲಿ ನಡೆದಿದೆ.ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್‌ ಆಗಿದ್ದ ಪವನ್ ಕುಮಾರ್ (25) ಎಂಬಾತನನ್ನು ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.





ತಣಿಸಂದ್ರದ ಅಮರಜ್ಯೋತಿ ಲೇಔಟ್ ನಿವಾಸಿಯಾಗಿದ್ದ ಪವನ್, ತನ್ನ ಬೇಕರಿ ಮುಚ್ಚಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ. ಈ ವೇಳೆ ಮೂರು ದ್ವಿಚಕ್ರ ವಾಹನಗಳಲ್ಲಿ ಹೆಲ್ಮೆಟ್ ಧರಿಸಿ ಆರು ಮಂದಿ ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಬಂದಿದ್ದಾರೆ.






ಪವನ್ ಮನೆ ಬಳಿ ಬೈಕ್ ನಿಲ್ಲಿಸುತ್ತಿದ್ದಂತೆಯೇ ಆತನ ತಾಯಿಗಳ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹೆತ್ತ ಮಗನನ್ನು ರಕ್ಷಿಸಲು ಸಹಾಯಕ್ಕಾಗಿ ತಾಯಿ ಗೋಗರೆಯುತ್ತಿದ್ದ ದೃಶ್ಯಗಳು ಮನಕಲಕುವಂತಿದ್ದವು.

error: Content is protected !!
Scroll to Top