ಜಾತಿ ನಿಂದನೆ ಪ್ರಕರಣ- ಆರೋಪಿಗೆ 1 ವರ್ಷ ಜೈಲು ಶಿಕ್ಷೆ



(ನ್ಯೂಸ್ ಕಡಬ) newskdaba.com ಫೆ.27. ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಮಂಗಳೂರಿನ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.





ವೇಣೂರು ಪೊಲೀಸ್ ಠಾಣೆಯಲ್ಲಿ 2021ರಲ್ಲಿ ಆರೋಪಿ ಖಾಲಿದ್ ಅಲಿಯಾಸ್ ಅಬ್ದುಲ್ ಖಾದರ್ ಎಂಬಾತನ ವಿರುದ್ಧ (ಅ.ಕ್ರ 15/2021) ಐಪಿಎಸಿ ಕಲಂ 452, 354(A), 506 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ವ್ಯಾಲೆಂಟೈನ್ ಡಿ’ಸೋಜಾ ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಗಳೊಂದಿಗೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.






ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಮಾನ್ಯ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಫೆಬ್ರವರಿ 26, 2026ರಂದು ತೀರ್ಪು ತೀರ್ಪು ಪ್ರಕಟಿಸಿದ್ದು, ಆರೋಪಿಗೆ ಐಪಿಸಿ ಕಲಂ 354-A ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ 1989ರ ಕಲಂ 3(1)(w)(i) ಅನ್ವಯ 1 ವರ್ಷದ ಸರಳ ಕಾರಾಗೃಹ ಶಿಕ್ಷೆ ಮತ್ತು ₹10,
ಮತ್ತು ₹10,000 ದಂಡ ವಿಧಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

error: Content is protected !!
Scroll to Top