(ನ್ಯೂಸ್ ಕಡಬ) newskadaba.com, ಫೆ.28: ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ 27 ವರ್ಷಗಳ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಇದೀಗನ ಈ ಜೋಡಿ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ.
ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಂಗೀತಾ ಅವರು ಫೆಬ್ರವರಿ 27ರಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿದಿದ್ದಾರೆ. ಈ ವಿಷಯದ ಬಗ್ಗೆ ವಿಜಯ್ ಅವರು ಇನ್ನೂ ಅಧಿಕೃತ ಹೇಳಿಕೆ ನೀಡುವುದು ಬಾಕಿ ಇದೆ. ನಟಿಯ ಜೊತೆ ವಿಜಯ್ ಅವರಿಗೆ ಅನೈತಿಕ ಸಂಬಂಧ ಇದೆ ಎಂದು ಪತ್ನಿ ಆರೋಪ ಮಾಡಿದ್ದು, ಕೋರ್ಟ್ ವಿಚಾರಣೆ ವೇಳೆ ಆ ನಟಿಯ ಹೆಸರು ಹೊರಬರಲಿದೆ.
ಈ ಹಿಂದೆ ದಳಪತಿ ವಿಜಯ್ ಅವರು ನಟಿಯೊಬ್ಬರ ಜೊತೆ ಸಂಬಂಧ ಹೊಂದಿದ್ದಾರೆ ಎಂಬ ಗಾಸಿಪ್ ಹಬ್ಬಿತ್ತು. ಇದೀಗ ಪತ್ನಿ ಆರೋಪ ಇದಕ್ಕೆಲ್ಲ ಪುಷ್ಟಿ ನೀಡಿದಂತಾಗಿದೆ.








