(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯು ನಡೆಸಲಿರುವ 6 ನೇ ತರಗತಿಯ ಪ್ರವೇಶ ಪರೀಕ್ಷೆಯು ಮಾರ್ಚ್ 1ರಂದು ಬಲ್ಮಠ ಸರಕಾರಿ ಮಹಿಳಾ ಪಿ.ಯು. ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷೆಯ ಸಮಯ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಮಿಥುನ್ ಹೆಚ್ ಎನ್ ಆದೇಶಿಸಿದ್ದಾರೆ.
6ನೇ ತರಗತಿಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ








