(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಬೆಂಗಳೂರು ಇವರ ವತಿಯಿಂದ ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳು ನಡೆಯುತ್ತದೆ. ಪರೀಕ್ಷಾ ಮಂಡಲಿಯ ಜಾಲತಾಣ kseab.Karnataka.gov.in ಮಕ್ಕಳ ಪರೀಕ್ಷಾ ಸಿದ್ಧತೆಗಾಗಿ ಮಾಹಿತಿಯನ್ನು ಒದಗಿಸಲಾಗಿರುತ್ತದೆ.
ಸಾಮಾಜಿಕ ತಾಣಗಳಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆಗಳು ಮಾರಾಟವಾಗುತ್ತಿವೆ ಎಂಬ ಸುದ್ದಿಗಳನ್ನು ಹರಡಲಾಗುತ್ತಿದೆ. ಪರೀಕ್ಷಾ ಮಂಡಳಿ ವತಿಯಿಂದ ಈ ಮಾಹಿತಿಯನ್ನು ಪರಿಶೀಲಿಸಲಾಗಿ ಯಾವುದೇ ಪೂರಕ ಪುರಾವೆಗಳು ಇರುವುದಿಲ್ಲ. ಇದು ತಪ್ಪು ಮಾಹಿತಿಯಾಗಿದ್ದು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಹುನ್ನಾರವಾಗಿದೆ.
ಇಂತಹ ಸುಳ್ಳು ಸುದ್ದಿಗಳನ್ನು ಹರಡುವವರನ್ನು ಗುರುತಿಸಿ ಅಂತಹವರ ವಿರುದ್ಧ ಕಾನೂನಾತ್ಮ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇಂತಹ ವದಂತಿಗಳಿಗೆ ಸಾರ್ವಜನಿಕರು, ಪಾಲಕ ಪೋಷಕರು ಮಹತ್ವ ನೀಡದೇ ತಮ್ಮ ಮಕ್ಕಳನ್ನು ಏಕಾಗ್ರತೆಯಿಂದ ಪರೀಕ್ಷೆ ಸಿದ್ಧತೆಗೆ ಪ್ರೋತ್ಸಾಹಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ : ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ








