ಟ್ರಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಮೃತ್ಯು



(ನ್ಯೂಸ್‌ ಕಡಬ) newskadaba.com,ಮಾ.02  ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.೧ ಆದಿತ್ಯವಾರ  ನಡೆದಿದೆ.
ಕುಂದಾಪುರದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ ಶುಭಶ್ರೀ ಕಾರಂತ್ (೫೩) ಸಾವನ್ನಪ್ಪಿದವರು.





ಕುಂದಾಪುರದಿಂದ ೮-೧೦ ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎಂದು ತಿಳಿದುಬಂದಿದೆ. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.






error: Content is protected !!
Scroll to Top