(ನ್ಯೂಸ್ ಕಡಬ) newskadaba.com, ಮಾ.03 : ಬ್ರಹ್ಮಾವರದ ಹೇರೂರು ನದಿ ಸೇತುವೆಯ ಸಮೀಪ ಸೋಮವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಹೇರೂರು ನದಿ ಸೇತುವೆಯ ಉದ್ದಕ್ಕೂ ಹಠಾತ್ ಜ್ವಾಲೆಗಳು ಕಾಣಿಸಿಕೊಂಡಿವೆ. ಬೆಂಕಿಯು ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣವೇನು? ಉಂಟಾದ ಹಾನಿ ಅಥವಾ ಘಟನೆಯಲ್ಲಿ ಯಾರಿಗಾದರೂ ಗಾಯಗಳಾಗಿದೆಯೇ ಎಂಬ ಮಾಹಿತಿ ಇನ್ನು ಲಭ್ಯವಾಗಿಲ್ಲ. ವಸತಿ ಪ್ರದೇಶಗಳಿಗೆ ಬೆಂಕಿ ಹರಡದಂತೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.








