ಉಳ್ಳಾಲ : ಪ್ರೇಮ ವೈಫಲ್ಯ – ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ



(ನ್ಯೂಸ್ಕಡಬ) newskadaba.com,  ಮಾ.03 :    ವಿದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲ ಸೋಮೇಶ್ವರದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ.





ಅವರು ಕಳೆದ ಒಂದೂವರೆ ವರ್ಷಗಳಿಂದ ಒಮಾನ್ ದೇಶದಲ್ಲಿ ಕೆಲಸ ಮಾಡುತ್ತಿದ್ದರು. ಸುಮಾರು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು ಮರಳಿ ಒಮಾನ್ ಗೆ ಹಿಂತಿರುಗಿದ್ದರು. ಮಾಹಿತಿಯ ಪ್ರಕಾರ, ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಉರ್ವಾದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಯುವತಿ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದ ಹಿನ್ನೆಲೆಯಲ್ಲಿ ಪುನೀತ್ ಮನನೊಂದಿದ್ದರು ಎನ್ನಲಾಗಿದೆ.






ಈ ವಿಷಯವನ್ನು ತಮ್ಮ ಗೆಳೆಯರ ಬಳಿಯೂ ಅವರು ಹಂಚಿಕೊಂಡಿದ್ದರು. ಪ್ರೀತಿ ದೂರವಾದ ನೋವಿನಲ್ಲಿ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೆಂದು ತಿಳಿದುಬಂದಿದೆ. ಇದರ ನಡುವೆ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಅಶಾಂತಿಯ ಪರಿಸ್ಥಿತಿಯ ಹಿನ್ನೆಲೆ ಒಮಾನ್ ದೇಶದ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳಲು ಸಮಯ ಬೇಕಾಗುವ ಸಾಧ್ಯತೆ ಇದೆ ಎಂದು ಕುಟುಂಬ ವಲಯವು ಬೇಸರ ವ್ಯಕ್ತಪಡಿಸಿದೆ.

error: Content is protected !!
Scroll to Top