ಶಬ್ದದ ವೇಗ ಮೀರಿ ಹಾರಿದ ಜೆಟ್ ವಿಮಾನ ಪುತ್ತೂರು ಜನರಲ್ಲಿ ಮೂಡಿದ್ದ ಆತಂಕ ನಿವಾರಣೆ



(ನ್ಯೂಸ್ಕಡಬ) newskadaba.com,  ಮಾ.04 : ನಗರದಲ್ಲಿ ಮಾ.03ರಂದು ಮಧ್ಯಾಹ್ನ ಜೆಟ್ ವಿಮಾನವೊಂದು ಹಲವು ಬಾರಿ ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ದೃಶ್ಯ ಕಂಡು ಬಂದಿದ್ದು, ಕೆಲ ಕಾಲ ಆತಂಕ ಮೂಡಿದ ಬೆನ್ನಲ್ಲೇ ಇದು ಭೂವೈಜ್ಞಾನಿಕಕ್ಕೆ ಸಂಬಂಧಿಸಿದ ಸರ್ವೇ ಕಾರ್ಯ ಎಂದು ತಿಳಿದು ಜನರು‌ ನಿಟ್ಟುಸಿರು ಬಿಟ್ಟಿದ್ದಾರೆ.





ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಗದ್ದೆ ಮೇಲ್ಭಾಗದಲ್ಲಿ ನೆಲ ಮಟ್ಟಕ್ಕೆ ಅತಿ ಸಮೀಪದಲ್ಲಿ ಜೆಟ್ ವಿಮಾನ ಹಾರಾಡುತ್ತಿದ್ದ ದೃಶ್ಯವನ್ನು ಜನರು ನೋಡಿದ್ದು, ಪದೇ ಪದೇ ನಗರದ ವಿವಿಧ ಭಾಗದಲ್ಲಿ ಹಾರಾಟ ನಡೆಸಿದೆ. ಸುಮಾರು‌10 ರಿಂದ 15 ಸುತ್ತು ಹಾರಾಟ ನಡೆಸಿದೆ.






ಇದು ಯಾರದ್ದು, ಯಾಕೆ ಹಾರಾಟ ನಡೆಸಿದೆ ಎನ್ಮುವ ಮಾಹಿತಿ ಲಭ್ಯವಾಗಿರಲಿಲ್ಲ. ಏಕಾಏಕಿ ವಿಮಾನ‌ ಹಾರಾಟ ನಡೆಸುತ್ತಿದ್ದ ದೃಶ್ಯ ಜನರಲ್ಲಿ ಆತಂಕ ಮೂಡಿಸಿತು. ಕೊನೆಗೂ ಇದು ಭೂಮಿಯ ರಚನೆ, ಅಧ್ಯಯನಕ್ಕೆ ಸಂಬಂಧಿಸಿದಂತೆ ನಡೆಸಿದ ಸರ್ವೆಯಾಗಿದೆ ಎಂಬ‌ ಮಾಹಿತಿ ಲಭಿಸಿದೆ.

error: Content is protected !!
Scroll to Top