(ನ್ಯೂಸ್ ಕಡಬ) newskadaba.com, ಮಾ.04 : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಕಲರವ ಶುರುವಾಗಲು ಸಿದ್ಧವಾಗಿದೆ. ಕಳೆದ ಕೆಲ ತಿಂಗಳುಗಳಿಂದ ನಿಷೇಧಕ್ಕೆ ಒಳಗಾಗಿದ್ದ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇದರ ಜೊತೆಗೆ ಆರ್ಸಿಬಿ ಅಭಿಮಾನಿಗಳಿಗೆ 3 ಗುಡ್ ನ್ಯೂಸ್ ಮತ್ತು 1 ಬ್ಯಾಡ್ ನ್ಯೂಸ್ ಸಿಕ್ಕಿದೆ.
ಗುಡ್ ನ್ಯೂಸ್:
ಉದ್ಘಾಟನಾ ಪಂದ್ಯ: ಐಪಿಎಲ್ 2026ರ ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಪ್ಲೇಆಫ್ ಪಂದ್ಯ: ಪ್ಲೇಆಫ್ ಸುತ್ತಿನ ಒಂದು ಪಂದ್ಯ (ಎಲಿಮಿನೇಟರ್ ಅಥವಾ ಮೊದಲ ಕ್ವಾಲಿಫೈಯರ್) ಕೂಡ ಬೆಂಗಳೂರಿನಲ್ಲಿ ಆಯೋಜನೆ.
ಫೈನಲ್ ಪಂದ್ಯ: ಐಪಿಎಲ್ 2026ರ ಫೈನಲ್ ಪಂದ್ಯವೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ರೀತಿಯಾಗಿ, ಆರ್ಸಿಬಿ ತಂಡದ 5 ಹೋಮ್ ಪಂದ್ಯಗಳ ಜೊತೆಗೆ 2 ವಿಶೇಷ ಪಂದ್ಯಗಳು ಬೆಂಗಳೂರಿನಲ್ಲಿ ಆಯೋಜನೆಯಾಗಿದ್ದು, ಒಟ್ಟು 7 ಪಂದ್ಯಗಳನ್ನು ಅಭಿಮಾನಿಗಳು ವೀಕ್ಷಿಸಲು ಸಾಧ್ಯ.
ಬ್ಯಾಡ್ ನ್ಯೂಸ್:
ಈ ಬಾರಿಯ ಐಪಿಎಲ್ ಪಂದ್ಯಗಳಿಗೆ ಸುರಕ್ಷತಾ ಕಾರಣಗಳಿಂದ ಸ್ಟೇಡಿಯಂನಲ್ಲಿ ಪ್ರೇಕ್ಷಕರ ಸಂಖ್ಯೆಯನ್ನು 30,000–35,000ಕ್ಕೆ ಸೀಮಿತಗೊಳಿಸಲಾಗಿದೆ. ಸಂಪೂರ್ಣ ಸೀಟಿಂಗ್ ಟಿಕೆಟ್ ಮಾರಾಟವಾಗುವುದಿಲ್ಲ, ಹೀಗಾಗಿ ಸೀಮಿತ ಸಂಖ್ಯೆಯ ಅಭಿಮಾನಿಗಳಿಗೆ ಮಾತ್ರ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಷಣೆಗೆ ಅವಕಾಶ.
ಲೀಗ್ ಹಂತದ 7 ಪಂದ್ಯಗಳಲ್ಲಿ 5 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ, ಉಳಿದ 2 ಪಂದ್ಯಗಳನ್ನು ಛತ್ತೀಸ್ಗಢದ ರಾಯ್ಪುರ ಶಾಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ.ಪ್ಲೇಆಫ್ ಮತ್ತು ಫೈನಲ್ ಪಂದ್ಯ ಬೆಂಗಳೂರಿನಲ್ಲೇ ನಡೆಯುತ್ತಿರುವುದರಿಂದ ಆರ್ಸಿಬಿ ಅಭಿಮಾನಿಗಳು ಈ ಬಾರಿ ಒಟ್ಟು 7 ಪಂದ್ಯಗಳ ಸಂಭ್ರಮವನ್ನು ಅನುಭವಿಸಬಹುದಾಗಿದೆ.








