ಉಡುಪಿ: ಮಾದಕ ದ್ರವ್ಯ ಸಾಗಾಟ ಜಾಲ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ



(ನ್ಯೂಸ್‌ ಕಡಬ) newskadaba.com, ಮಾ.09 : ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ. ಬೆಳಪು ಗ್ರಾಮದ ದರ್ಗಾ ಸಮೀಪದ    ನಿವಾಸಿ ಝಹೀರ್ ಅಹ್ಮದ್(66) ಮತ್ತು ಬೆಳಪು ಸ್ಟಡಿ ಸರ್ಕಲ್ ನಿವಾಸಿ ಸಯ್ಯದ್ ಶಮೀಮ್(28) ಬಂಧಿತ ಆರೋಪಿಗಳು. ಇವರಿಂದ 2.83 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಪೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ.





ಇವರು ಕಾರಿನಲ್ಲಿ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಕಾರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಮಾದಕ ವಸ್ತು ಸಾಗಿಸುತ್ತಿರುವುದು ಕಂಡುಬಂತು. ಅದರಂತೆ ಕಾರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.






ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ್ ನಿರ್ದೇಶನದಂತೆ, ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ್ ಪ್ರಸಾದ್ ಮತ್ತು ಕಾಪು ವೃತ್ತ ನಿರೀಕ್ಷಕ ಅಝಮತ್ ಆಲಿ ಮಾರ್ಗದರ್ಶನದಲ್ಲಿ ಶಿರ್ವ ಪೊಲೀಸ್ ಠಾಣಾ ಎಸ್ಸೈಗಳಾದ ಮಂಜುನಾಥ ಮರಬದ, ಲೋಹಿತ್ ಕುಮಾರ್ ಹಾಗೂ ಠಾಣಾ ಸಿಬ್ಬಂದಿ ಹಾಗೂ ಅಪರಾಧ ಪರಿಶೀಲನಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

error: Content is protected !!
Scroll to Top