ಇಂದಿನ ಚಿನ್ನದ ಬೆಲೆ



(ನ್ಯೂಸ್ಕಡಬ) newskadaba.com, ಮಾ.09 : ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ವಾರಾಂತ್ಯದಲ್ಲಿ ಜಿಗಿದಿದ್ದ ಇದರ ಬೆಲೆ ಇವತ್ತು ಸೋಮವಾರ ಗ್ರಾಮ್​ಗೆ 180 ರೂಗಳಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) ಮತ್ತೊಮ್ಮೆ 15,000 ರೂ ಗಡಿಯೊಳಗೆ ಬಂದಿದೆ. ಕಳೆದ ವಾರ ಸತತ ನಾಲ್ಕೈದು ದಿನ ಬಂಗಾರದ ಬೆಲೆ ಇಳಿಕೆಯಾಗಿತ್ತು.





ಇನ್ನು, ಬೆಳ್ಳಿ ಬೆಲೆಯೂ ಇವತ್ತು ಕಡಿಮೆಗೊಂಡಿದೆ. ಗ್ರಾಮ್​ಗೆ 5 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,48,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.






ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,168 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,820 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,126 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,168 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,820 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

error: Content is protected !!
Scroll to Top