(ನ್ಯೂಸ್ ಕಡಬ) newskadaba.com ಹಾಸನ,ಮೇ.12. ಮತದಾರರನ್ನು ಕೊಂಡೊಯ್ಯುತ್ತಿದ್ದ ಆಟೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆಯು ಹಾಸನ ಜಿಲ್ಲೆಯ ಬೇಲೂರು ರಸ್ತೆಯಲ್ಲಿ ಸಂಭವಿಸಿದೆ.
ಇಂದು ಬೆಳಗ್ಗೆ ಮತದಾರರನ್ನು ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆಯು ಬೇಲೂರು ರಸ್ತೆ ರಾಮೇನಹಳ್ಳಿ ಗೇಟ್ ಬಳಿ ಸಂಭವಿಸಿದ್ದು, ಆಟೋದಲ್ಲಿ ಇದ್ದ ಲಕ್ಷ್ಮಮ್ಮ(46) ಎಂಬ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆಟೋದಲ್ಲಿದ್ದ ಇನ್ನೋರ್ವ ಮಹಿಳೆಗೆ ತೀರ್ವ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ. ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.