(ನ್ಯೂಸ್ ಕಡಬ) newskadaba.com, ಮಾ.12: ಮಧ್ಯಪ್ರಾಚ್ಯದಲ್ಲಿ ಯುದ್ದ ಮುಂದುವರೆದಿರುವ ಹಿನ್ನೆಲೆಯಲ್ಲಿ ಭಾರತದ ಮೇಲೆ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ವಾಣಿಜ್ಯ ಸಿಲಿಂಡರ್ಗಳ ಮಾರಾಟದ ಮೇಲೆ ಪರಿಣಾಮ ಎದುರಾಗಿದ್ದು, ಇದರೊಂದಿಗೆ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಆತಂಕ ಶುರುವಾಗಿದೆ.
ಕರ್ನಾಟಕದ ಹಲವು ಹೊಟೇಲ್ ವ್ಯವಹಾರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬಿದ್ದಿದೆ. ಉಡುಪಿಯ ಹಲವೆಡೆ ಅಡುಗೆ ಅನಿಲ ಸಾಕಷ್ಟು ಸಂಗ್ರಹ ಇರುವುದರಿಂದ ಸದ್ಯದ ಮಟ್ಟಿಗೆ ಯಾವುದೇ ಅಡ್ಡಿಯಾಗಿಲ್ಲ. ಆದರೆ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಸಮಸ್ಯೆ ಎದುರಾಗಿದ್ದು, ಶಾಪ್ ಮುಚ್ಚುವ ಭೀತಿ ಎದುರಾಗಿದೆ. ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಬೇಕಿದ್ದು, ಇಲ್ಲವಾದಲ್ಲಿ ಎಲ್ಲಾ ಫಾಸ್ಟ್ ಫುಡ್ ಅಂಗಡಿಗಳನ್ನು ಮುಚ್ಚುವ ಸ್ಥಿತಿ ಉಂಟಾಗಬಹುದೆಂದು ಫಾಸ್ಟ್ ಫುಡ್ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.












