(ನ್ಯೂಸ್ ಕಡಬ) newskadaba.com ಕಡಬ, ಮಾ.13. ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಅಪರಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ.
ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬಸ್ ನಡುವೆ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








