ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ



(ನ್ಯೂಸ್ ಕಡಬ) newskadaba.com ಮಾ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ  ಏರ್ಪಡಿಸಲಾಗಿದೆ.
ಮಾರ್ಚ್ 17 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಮಾರ್ಚ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಮಾರ್ಚ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





error: Content is protected !!
Scroll to Top