ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ದೂರು ದಾಖಲು



(ನ್ಯೂಸ್‌ ಕಡಬ) newskadaba.com ಮಾ. 17. ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಲು ಆಮಿಷವೊಡ್ಡಿ 25.85 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





ದೂರಿನ ಪ್ರಕಾರ, ನಿವೃತ್ತಿ ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವರಿಗೆ ವಾಟ್ಸ್‌ ಆ್ಯಪ್‌ ಮೂಲಕ ಬಂದ ಟ್ರೇಡಿಂಗ್ ಮಾಹಿತಿಯ ಸಂದೇಶವನ್ನು ಪರಿಶೀಲಿಸಿ, ಸಂದೇಶ ಕಳುಹಿಸಿದವರೊಂದಿಗೆ ವಾಟ್ಸ್‌ ಆ್ಯಪ್‌ ನಲ್ಲಿ ಚಾಟಿಂಗ್ ನಡೆಸಿದ್ದರು. ಬಳಿಕ ಆರೋಪಿಗಳು ವಿವಿಧ ವಾಟ್ಸ್‌ಆ್ಯಪ್ ಗ್ರೂಪ್‌ಗಳಿಗೆ ಅವರನ್ನು ಸೇರಿಸಿ ಶೇ.25






ಲಾಭಾಂಶ ನೀಡಲಾಗುವುದು ಎಂದು ತಿಳಿಸಿ ಜ.21ರಿಂದ ಫೆ.12ರ ವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ 25,85,312 ರೂ. ವರ್ಗಾವಣೆ ಮಾಡಿರುವುದಾಗಿ ದೂರಲಾಗಿದೆ. ಆರೋಪಿಗಳು ಹೂಡಿಕೆ ಮಾಡಿದ ಹಣ ನೀಡದೆ ವಂಚಿಸಿರುವ ಬಗ್ಗೆ ಸೂಕ್ತ ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

error: Content is protected !!
Scroll to Top