ರಾಜ್ಯದ ವಿವಿಧೆಡೆ ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ್ದ ಸಿಲಿಂಡರ್ ಗಳು ವಶ

(ನ್ಯೂಸ್‌ ಕಡಬ) newskadaba.com ಮಾ. 17. ರಾಜ್ಯದ ವಿವಿಧೆಡೆ ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ್ದ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್‌ ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪೊಲೀಸ್‌‍ ಸಹಕಾರದೊಂದಿಗೆ ತಡರಾತ್ರಿ ದಾಳಿ ನಡೆಸಿದ ಅಧಿಕಾರಿಗಳು, ಅನಿಲ ತುಂಬಿದ 25 ಸಿಲಿಂಡರ್‌ಗಳನ್ನು ಪತ್ತೆ ಹಚ್ಚಿ ವಿದ್ಯಾನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಕಾಯ್ದೆಯಡಿ ಹೋಟೆಲ್‌ ಸಹ ಮಾಲೀಕರ ವಿರುದ್ಧ ಆಹಾರ ನಿರೀಕ್ಷಕ ವಿಜಯಕುಮಾರ ಪತ್ತಾರ ದೂರು ನೀಡಿದ್ದಾರೆ.

 

ಗೋ ಗ್ಯಾಸ್‌‍ ಕಂಪನಿಯಿಂದ ಪೂರೈಕೆಯಾಗುವ ಅನಿಲದ ಸಿಲಿಂಡರ್‌ ಗಳನ್ನು ಹೋಟೆಲ್‌ನಲ್ಲಿ ಹೆಚ್ಚುವರಿಯಾಗಿ ದಾಸ್ತಾನು ಮಾಡಲಾಗಿತ್ತು. ಎಲ್ಲಿಂದ ಪೂರೈಕೆಯಾಗಿದೆ ಎನ್ನುವ ಕುರಿತು ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾರು ಇಲಾಖೆ ವಿಜಯಕುಮಾರ ಹೆಗ್ಗಳಗಿ ತಿಳಿಸಿದರು.

Scroll to Top