ಬೆಳ್ತಂಗಡಿ : ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ – ಒಬ್ಬ ಮೃತ್ಯು



(ನ್ಯೂಸ್‌ ಕಡಬ) newskadaba.com, ಮಾ.21 ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ.







ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ.






ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಕಿಶೋರ್ ಪಿ. ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….

error: Content is protected !!
Scroll to Top