ಕೆವಿಜಿ : ಇಂಜಿನಿಯರಿಂಗ್‌ ಕಲಿಕೆಗೆ ವಿದ್ಯಾರ್ಥಿವೇತನ



(ನ್ಯೂಸ್‌ ಕಡಬ) newskadaba.com, ಮಾ.21 2026-27ನೇ ಶೈಕ್ಷಣಿಕ ವರ್ಷದಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಸೇರ್ಪಡೆಯಾಗುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಕಲಿಕೆಗೆ ವಿದ್ಯಾರ್ಥಿವೇತನ ನೀಡಲಾಗುವುದು ಮತ್ತು ಇದಕ್ಕಾಗಿ ಆನ್‌ಲೈನ್ ಮೂಲಕ ಕೆ.ವಿ.ಜಿ. ಸ್ಕಾಲರ್ಶಿಪ್ ಪರೀಕ್ಷೆಯನ್ನು ಮಾ.25ರಿಂದ ಪ್ರಾರಂಭಿಸಲಾಗುವುದು ಎಂದು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಇದರ ಚೇರ್ಮನ್ ಡಾ. ರೇಣುಕಾಪ್ರಸಾದ್ ಕೆ.ವಿ. ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







 

ವಿದ್ಯಾರ್ಥಿವೇತನಕ್ಕೆ ಆಯ್ಕೆಮಾಡುವ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ನಡೆಸಲಾಗುವ ಕೆ.ವಿ.ಜಿ. ಸ್ಕಾಲರ್ಶಿಪ್ ಪರೀಕ್ಷೆಯ ಅಂಕ, ಟ್ರಸ್ಟ್ ಸ್ಕೋರ್ (ಎ. ಬಿ. ಆಧಾರಿತ ಪರೀಕ್ಷಾ ಪ್ರಾಮಾಣಿಕತೆಯ ಸೂಚ್ಯಂಕ), ಗ್ರಾಮೀಣ ವ್ಯಾಸಂಗ (ಇದ್ದಲ್ಲಿ) ಮತ್ತು ಪೋಷಕರ ವಾರ್ಷಿಕ ಆದಾಯಗಳನ್ನು ಪರಿಗಣಿಸಲಾಗುವುದು. ಈ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳು ಕಾಲೇಜಿನ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ರೂಪದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ಪರೀಕ್ಷಾ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು ವಿದ್ಯಾರ್ಥಿಗಳು ಇದಕ್ಕಾಗಿ ಯಾವುದೇ ಶುಲ್ಕ ಪಾವತಿಸಬೇಕಿಲ್ಲ. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಯಾವುದೇ ದಿನ ಯಾವುದೇ ಸಮಯದಲ್ಲಿ ಒಂದು ಗಂಟೆಯ ಅವಧಿಯಲ್ಲಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಮುಖಾಂತರ ಈ ಆನ್‌ಲೈನ್ ಪರೀಕ್ಷೆಯನ್ನು ಉತ್ತರಿಸಬಹುದು. ಪರೀಕ್ಷೆಯ ಹೆಚ್ಚಿನ ಮಾಹಿತಿಯನ್ನು ಮಾ.25 ರಂದು ಕಾಲೇಜಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು..






error: Content is protected !!
Scroll to Top