(ನ್ಯೂಸ್ ಕಡಬ) newskadaba.com, ಮಾ.26; ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದು ಹಾಸನ, ಚಿಕ್ಕಮಗಳೂರು, ಹುಬ್ಬಳ್ಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.









