(ನ್ಯೂಸ್ ಕಡಬ) newskadaba.com, ಮಾ.26 ಎಣ್ಮೂರು: ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಪೂರ್ವಭಾವಿಯಾಗಿ ಗೊನೆ ಮುಹೂರ್ತ ಕಾರ್ಯಕ್ರಮವು ಮಾರ್ಚ್ 25ರಂದು ಭಕ್ತಿಭಾವದಿಂದ ನೆರವೇರಿತು.
ಈ ಕಾರ್ಯಕ್ರಮವು ಅನುವಂಶಿಕ ಆಡಳಿತದಾರರಾದ ಕಟ್ಟ ಬೀಡು ರಾಮಕೃಷ್ಣ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದಿದ್ದು, ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು.
ನೇಮೋತ್ಸವದ ಅಂಗವಾಗಿ ನಡೆದ ಈ ಗೊನೆ ಮುಹೂರ್ತ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದರು. ಮುಂದಿನ ದಿನಗಳಲ್ಲಿ ನಡೆಯಲಿರುವ ನೇಮೋತ್ಸವಕ್ಕೆ ಗ್ರಾಮಸ್ಥರು ಹಾಗೂ ಭಕ್ತರಲ್ಲಿ ವಿಶೇಷ ಉತ್ಸಾಹ ಮನೆಮಾಡಿದೆ…









