(ನ್ಯೂಸ್ ಕಡಬ) newskadaba.com, ಮಾ.26 ರಾಜ್ಯದಲ್ಲಿ ಪೆಟ್ರೋಲ್ ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಮಧ್ಯೆ ಚಿಕ್ಕಬಳ್ಳಾಪುರದ ನಯಾರ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ…
ಪೆಟ್ರೋಲ್ ಪ್ರತಿ ಲೀಟರ್ ಮೇಲಿನ ದರ (Petrol Price) 5 ರೂಪಾಯಿ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ 1 ಲೀಟರ್ ಪೆಟ್ರೋಲ್ ಬೆಲೆ 108.28 ರೂ.ಗಳಿಗೆ ತಲುಪಿದ್ದರೆ, ಡೀಸೆಲ್ ಬೆಲೆ 1 ಲೀಟರ್‌ಗೆ 94.10 ರೂ.ಗಳಿಗೆ ಮಾರಾಟ ಮಾಡಲಾಗ್ತಿದೆ.









