(ನ್ಯೂಸ್ ಕಡಬ) newskadaba.com ಮಾ. 27. ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೊಕ್ಕೊಟ್ಟು ಫೈ ಓವರಲ್ಲಿ ಶುಕ್ರವಾರ ನಸುಕಿನ 3.30ರ ಸುಮಾರಿಗೆ ನಡೆದಿದೆ.
ಕೊಲೆಯಾದವರನ್ನು ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಎಂದು ಗುರುತಿಸಲಾಗಿದೆ.
ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಬೆಳಗ್ಗೆ ಬುಲೆಟ್ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಆತನ ಮೇಲೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮೃತ ಆರೀಫ್ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.









