ಇಂದು ಚಿನ್ನದ ದರದಲ್ಲಿ ಏರಿಕೆ



(ನ್ಯೂಸ್‌ ಕಡಬ) newskadaba.com,  ಮಾ.31: ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ ಗ್ರಾಮ್​ಗೆ 185 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯೂ ಮಂಗಳವಾರ ಹೆಚ್ಚಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಮತ್ತೊಮ್ಮೆ 250 ರೂ ಗಡಿ ಮುಟ್ಟಿದೆ.







ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,290 ರುಪಾಯಿ ಆಗಿದೆ.






100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 31ಕ್ಕೆ)

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,929 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,685 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,197 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,929 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,685 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

 

error: Content is protected !!
Scroll to Top