ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ



(ನ್ಯೂಸ್ ಕಡಬ) newsksdaba.com ಏ. 06. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2025ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಈ ಕೆಳಕಂಡ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುತ್ತದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2025 ರ ಜನವರಿ 1ರಿಂದ 2025 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2025 ಎಂದು ಮುದ್ರಿತವಾಗಿರಬೇಕು.
ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ (30 ವರ್ಷ ಒಳಗಿನ ಯುವಕವಿಗಳ ಅಪ್ರಕಟಿತ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು. (ಚಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನಕ್ಕಾಗಿ),  ಕಾದಂಬರಿ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಚದುರಂಗ ದತ್ತಿನಿಧಿ ಬಹುಮಾನಗಳಿಗಾಗಿ), ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿನಿಧಿ ಬಹುಮಾನಗಳಿಗಾಗಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ / ಆತ್ಮಕಥೆ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನಗಳಿಗಾಗಿ), ಸಾಹಿತ್ಯ ವಿಮರ್ಶೆ (ಸಾಹಿತ್ಯಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನಗಳಿಗಾಗಿ),  ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ), ಮಾನವಿಕ (ಜಾನಪದ, ಇತಿಹಾಸ, ರಾಜ್ಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾತಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹಸಂವಹನ, ಧಾರ್ಮಿಕ, ದಾರ್ಶನಿಕ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ) / ಸಂಶೋಧನೆ (ಕನ್ನಡ ಭಾಷಾ ಸಾಹಿತ್ಯ ಮತ್ತು ಸಂಸ್ಕೃತಿಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ/ಅಂಕಣ ಬರಹ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಬಿ.ವಿ. ವೀರಭದ್ರಪ್ಪ ದತ್ತಿನಿಧಿ ಬಹುಮಾನಗಳಿಗಾಗಿ),  ಅನುವಾದ-1 (ಇಂಗ್ಲಿಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಸೃಜನ ಸೃಜನೇತರ ಕೃತಿಗಳು) (ಎಲ್. ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-2 (ಕನ್ನಡದಿಂದ ಭಾರತೀಯ ಭಾಷೆಗಳಿಗೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿ),  ಲೇಖಕರ ಮೊದಲ ಸ್ವತಂತ್ರಕೃತಿ (2025ರಲ್ಲಿ ಮುದ್ರಣಗೊಂಡ ಮೊದಲ ಸ್ವತಂತ್ರಕೃತಿ ಖಾತರಿಪಡಿಸಲು ದೃಢೀಕರಣ ಪತ್ರ ಲಗತ್ತಿಸಬೇಕು.) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಮಧುರಚೆನ್ನ ದತ್ತಿನಿಧಿ ಬಹುಮಾನಗಳಿಗಾಗಿ) (ಕಾವ್ಯ ಪ್ರಕಾರವನ್ನು ಹೊರತುಪಡಿಸಿ], ಕನ್ನಡದಿಂದ ಇಂಗ್ಲಿಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನಕ್ಕಾಗಿ),  ದಾಸ ಸಾಹಿತ್ಯ (ದಾಸ ಸಾಹಿತ್ಯಕುರಿತ ಸೃಜನ, ಸೃಜನೇತರ ಕೃತಿಗಳು) (ಶ್ರೀಮತಿ ಜಲಜಾ ಶ್ರೀಪತಿ ಆಚಾರ್ಯಗಂಗೂರ್ ದತ್ತಿನಿಧಿ ಬಹುಮಾನಕ್ಕಾಗಿ), ಸಂಕೀರ್ಣ (ಮೇಲಿನ ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು), ಗಜಲ್ ಕಾವ್ಯ (ನಾಡೋಜ ಡಾ. ಶಾಂತರಸ ಹೆಂಬೆರಾಳು ಗಜಲ್ ಕಾವ್ಯ ದತ್ತಿ ಬಹುಮಾನಕ್ಕಾಗಿ),  ಕುವೆಂಪು ಅವರ ಕೃತಿಗಳು ಮತ್ತು ಆಶಯಗಳ ಹಿನ್ನೆಲೆಯಲ್ಲಿ ರಚನೆಗೊಂಡ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದ ಪುಸ್ತಕ (ಬಾ ಇಲ್ಲಿ ಸಂಭವಿಸು- ಶ್ರೀಮತಿ ಕೆ.ಎಲ್ ಲಕ್ಷ್ಮಮ್ಮ ಮತ್ತು ಪ್ರೊ. ಶಿವರಾಮಯ್ಯ ದತ್ತಿನಿಧಿ ಬಹುಮಾನಕ್ಕಾಗಿ).







 

ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು: ಮರುಮುದ್ರಣವಾದ ಪುಸ್ತಕಗಳು, ಪಿಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು,  ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು,  ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.






 

ಮೇಲ್ಕಂಡ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಜೂನ್ 30 ರೊಳಗೆ ತಲುಪಿಸಬೇಕು. ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು  ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top