ಸುಬ್ರಹ್ಮಣ್ಯದಲ್ಲಿ ಏಪ್ರಿಲ್ 7ರಂದು ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ



(ನ್ಯೂಸ್ಕಡಬ) newskadaba.com,  ಎ.06 ಸುಬ್ರಹ್ಮಣ್ಯ: ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಏಪ್ರಿಲ್ 7ರಂದು ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.







ಈ ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ (NSS), ಯುವ ರೆಡ್ ಕ್ರಾಸ್ ಘಟಕ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಹಾಗೂ ಮಂಗಳೂರಿನ ಖ್ಯಾತ ಪ್ರಸಾದ ನೇತ್ರಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ.






​ಕಣ್ಣಿನ ಸಮಸ್ಯೆ ಇರುವವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಿ, ತಜ್ಞ ವೈದ್ಯರ ಸೇವೆಯನ್ನು ಪಡೆದುಕೊಳ್ಳುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ವಿನಂತಿಸಿದ್ದಾರೆ.

error: Content is protected !!
Scroll to Top