ಎಸ್.ಟಿ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಾವಕಾಶ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newsksdaba.com ಏ. 08. 2026-27ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಟಿತ ಶಾಲೆಗಳಲ್ಲಿ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ  ದಿನ.







ಶಾಲೆಗಳ ವಿವರ: 1) ಶಾರದಾ ವಿದ್ಯಾಲಯ ಕೊಡಿಯಾಲ್‍ಬೈಲ್ 2) ಶಾರದಾ ಗಣಪತಿ ವಿದ್ಯಾಕೇಂದ್ರ ಕೈರಂಗಳ ಅಂಚೆ, 3) ಬಂಟ್ವಾಳ ತಾಲೂಕಿನ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ,  4) ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ, 5) ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ,  6) ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಉಜಿರೆ, 7) ವಾಣಿ ಇಂಗ್ಲೀಷ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, 8) ಸೆಕ್ರೇಡ್ ಹಾಟ್ಸ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ, ಮಡಂತ್ಯಾರು, ಬೆಳ್ತಂಗಡಿ.






ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ನಿಗಧಿತ ಗುರಿಗಳಿಗಿಂತ ಹೆಚ್ಚು ಅರ್ಜಿಗಳು ಸಲ್ಲಿಕೆಯಾದಲ್ಲಿ ವಿದ್ಯಾರ್ಥಿಗಳನ್ನು ಡಯಟ್ ಮೂಲಕ ಪ್ರವೇಶ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಆಯಾಯ ತಾಲೂಕುಗಳ  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ  ನಗರದ ಕೊಟ್ಟಾರದ ಅಬ್ಬಕ್ಕ ನಗರದಲ್ಲಿರುವ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಕಚೇರಿ ದೂ.ಸಂ: 0824-2451269 ಸಂಪರ್ಕಿಸಬಹುದು ಎಂದು ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top