(ನ್ಯೂಸ್ ಕಡಬ) newskadaba.com ,ಎ10: ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಕಾಫಿನಾಡ ದತ್ತಪೀಠದ ಮಾಣಿಕ್ಯಾಧಾರ ಬಳಿ ಬಾಲಕಿ ನಾಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಬಾಲಕಿ ಶ್ರೀನಂದಾ ತಾಯಿ ರೋಹಿಣಿ ಈ ಬಗ್ಗೆ ಪೊಲೀಸರ ಜೊತೆ ಚರ್ಚಿಸಿದ್ದು, ಮಗಳು ಆಕಸ್ಮಿಕವಾಗಿ ಬಿದ್ದಿರಲು ಸಾಧ್ಯವಿಲ್ಲ. ಯಾರೋ ಮಾದಕ ದ್ರವ್ಯ ಕೊಟ್ಟು ಅಪಹರಿಸಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.









