ಮೂಡುಬಿದಿರೆ : ಕಾಲುಸಂಕ ಮುರಿದುಬಿದ್ದು ಹಲವರಿಗೆ ಗಾಯ



(ನ್ಯೂಸ್‌ ಕಡಬ) newskadaba.com,  ಎ.23:  ತಾಕೋಡೆ ಬರ್ಕೆ ಧರ್ಮನೇಮಕ್ಕೆ ಬಾವದಗುತ್ತುವಿನಿಂದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗಿಸುತ್ತಿದ್ದ ವೇಳೆ ಕಾಲು ಸಂಕ ಮುರಿದು ಬಿದ್ದು ಎಂಟು ಮಂದಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ……..







ಸುನಿಲ್ ಶೆಟ್ಟಿ ಮುಕಾಲ್ದಿ, ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಘಟನೆ ತಿಳಿದ ಕೂಡಲೇ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ, ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಾಯ ಮಾಡಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.






 

error: Content is protected !!
Scroll to Top