(ನ್ಯೂಸ್ ಕಡಬ) newskadaba.com, ಎ.25: ನಗರದಲ್ಲಿನ ಹೆಚ್ಚುತ್ತಿರುವ ಟ್ರಾಫಿಕ್ ದಟ್ಟಣೆ ಮತ್ತು ಮಾಲಿನ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಯೋಜನೆ ಘೋಷಿಸಿದೆ.
ಪರಿಸರ ಸ್ನೇಹಿ ಪ್ರಯಾಣವನ್ನು ಉತ್ತೇಜಿಸಲು ಹಾಗೂ ಖಾಸಗಿ ವಾಹನ ಬಳಕೆಯನ್ನು ಕಡಿಮೆ ಮಾಡಲು, ವಾರದಲ್ಲಿ ಕನಿಷ್ಠ ಎರಡು ದಿನ ಮೆಟ್ರೋ ಅಥವಾ ಸಾರ್ವಜನಿಕ ಸಾರಿಗೆ ಬಳಸುವ ಸಿಬ್ಬಂದಿಗೆ ಆರ್ಥಿಕ ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ.
ಯೋಜನೆಯ ಮೊದಲ ಹಂತದಲ್ಲಿ ಸುಮಾರು 1,000 ಉದ್ಯೋಗಿಗಳಿಗೆ ಪ್ರತಿ ತಿಂಗಳು ₹2,000 ಮೌಲ್ಯದ ಮೆಟ್ರೋ ಪಾಸ್ ಅಥವಾ ನಗದು ಪ್ರೋತ್ಸಾಹಧನ ನೀಡಲಾಗುತ್ತದೆ. ಈ ಕ್ರಮದಿಂದ ಉದ್ಯೋಗಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ತಲುಪುವುದರ ಜೊತೆಗೆ, ನಗರದಲ್ಲಿ ವಾಹನ ದಟ್ಟಣೆ ಮತ್ತು ವಾಯು ಮಾಲಿನ್ಯ ಕಡಿಮೆ ಮಾಡುವುದಕ್ಕೂ ಸಹಕಾರಿಯಾಗಲಿದೆ.
ಈ ಉಪಕ್ರಮವು ಕಾರ್ಪೊರೇಟ್ ವಲಯದಲ್ಲಿ ಹೊಸ ಮಾದರಿಯನ್ನೇ ನಿರ್ಮಿಸಲಿದೆ ಎನ್ನಲಾಗಿದ್ದು, ಇತರ ಕಂಪನಿಗಳೂ ಇದೇ ರೀತಿಯ ಪರಿಸರಪರ ಕ್ರಮಗಳನ್ನು ಅನುಸರಿಸುವ ನಿರೀಕ್ಷೆ ವ್ಯಕ್ತವಾಗಿದೆ.









