(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.18. ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಮುಳ್ಳಿನ ಹಾದಿಯಲ್ಲಿ ಸಿಲುಕಿದ್ದು, ನಾಳೆಯೇ ವಿಶ್ವಾಸ ಮತ ಸಾಬೀತು ಪಡಿಸಲು ಯಡಿಯೂರಪ್ಪರಿಗೆ ಸುಪ್ರೀಮ್ ಕೋರ್ಟ್ ಆದೇಶ ನೀಡಿದೆ.
ನಾಳೆ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಮ್ ಕೋರ್ಟ್ ಸಲಹೆಗೆ ಬಿಜೆಪಿ ವಕೀಲ ರೋಹ್ಟಗಿ ವಿರೋಧ ವ್ಯಕ್ತಪಡಿಸಿದ್ದು, ಈ ನಡುವೆ ನಾಳೆಯೇ ಬಹುಮತ ಸಾಬೀತು ಪಡಿಸಲು ಕಾಂಗ್ರೆಸ್ ಸಿದ್ಧ ಎಂದು ಕಾಂಗ್ರೆಸ್ ಪರ ವಕೀಲ ಸಿಂಘ್ವಿ ಸುಪ್ರೀಮ್ ಕೋರ್ಟ್ ಗೆ ತಿಳಿಸಿದ್ದಾರೆ. ವಾದ ವಿವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ನಾಳೆ ಸಂಜೆ ನಾಲ್ಕು ಗಂಟೆಗೆ ಮೊದಲು ಬಹುಮತ ಸಾಬೀತು ಪಡಿಸುವಂತೆ ಸೂಚನೆ ನೀಡಿದ್ದು, ರಹಸ್ಯ ಮತದಾನಕ್ಕೆ ಅವಕಾಶ ನೀಡುವಂತೆ ಕೋರಿ ಬಿಜೆಪಿ ವಕೀಲರು ನೀಡಿದ್ದ ಮನವಿಯನ್ನು ತಿರಸ್ಕರಿಸಿದೆ. ಜೊತೆಗೆ ವಿಶ್ವಾಸ ಮತ ಸಾಬೀತು ವೇಳೆ ಎಲ್ಲಾ ಶಾಸಕರಿಗೂ ಭದ್ರತೆ ನೀಡುವಂತೆ ಸುಪ್ರೀಮ್ ಕೋರ್ಟ್ ತ್ರಿಸದಸ್ಯ ಪೀಠವು ಡಿ.ಜಿ.ಪಿ.ಗೆ ಸೂಚನೆ ನೀಡಿದೆ.