ಕುಂತೂರು: ಚರಂಡಿಗಿಳಿದು ಹಿಂತಿರುಗಿ ನಿಂತ ಕಾರು ► ಕಾರಿನಲ್ಲಿದ್ದ ದಂಪತಿ ಪಾರು

(ನ್ಯೂಸ್ ಕಡಬ) newskadaba.com ಕಡಬ, ಮೇ.18. ಚಾಲಕನ‌ ನಿಯಂತ್ರಣ ತಪ್ಲಿದ ಮಾರುತಿ ಬಲೆನೋ‌ ಕಾರೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಪೆರಾಬೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಮಂಗಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದು ಹಿಂತಿರುಗಿ ನಿಂತಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಶ್ರೀಧರ್ ಹಾಗೂ ಅವರ ಪತ್ನಿ ನಳಿನಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Also Read  ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ..! ➤ ಚಾಲಕನಿಗೆ ಗಾಯ

error: Content is protected !!