ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮೇ.08:  ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮೇ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ಬಿಸಿ ಗಾಳಿ ಹಾಗೂ ಬಿಸಿಲಿನ ವಾತಾವರಣ ಇರಲಿದೆ ಎಂದು ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top