ಆಸ್ತಿ ವಿಚಾರಕ್ಕೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; ಪ್ರಕರಣ ದಾಖಲು



(ನ್ಯೂಸ್‌ ಕಡಬ) newskadaba.comಮೇ.08: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ಐತ್ತೂರು ನಿವಾಸಿ ಬೇಬಿ ಕೆ.ಎಸ್. ಎಂಬವರು ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ್ದು, ತನ್ನ ಮನೆಯ ಸಮೀಪ ಬೋರ್ ವೆಲ್ ನಲ್ಲಿ ನೀರು ಸಿಕ್ಕಿದ್ದರಿಂದ ಅಸೂಯೆಗೊಂಡ ತಬ್ನ ಗಂಡನ ಸಹೋದರ ಕುಸುಮಾಧರ(೩೭) ಎಂಬಾತ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ್ದು, ಈ ವೇಳೆ ತಾನು ಬೊಬ್ಬೆ ಹಾಕಿದಾಗ ಪೆಟ್ರೋಲ್ ಕ್ಯಾನ್ ಮತ್ತು ಬೆಂಕಿ ಪಟ್ಟಣವನ್ನು ಎಸೆದು ಪರಾರಿಯಾಗಿರುವುದಾಗಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







error: Content is protected !!
Scroll to Top