ವಾರ್ತಾ ಇಲಾಖೆಯ ಪತ್ರಿಕಾ ವಾಹನಕ್ಕೆ ಚಾಲನೆ



(ನ್ಯೂಸ್‌ ಕಡಬ) newskadaba.com ಮೇ. 09. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯ ಪತ್ರಕರ್ತರ ಪ್ರವಾಸದ ಅನುಕೂಲಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಹಂಚಿಕೆಯಾದ ಹೊಸ ಪತ್ರಿಕಾ ವಾಹನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ನಗರದ ಸುಲ್ತಾನ್ ಬತ್ತೇರಿಯಲ್ಲಿ ಹಸಿರು ನಿಶಾನೆ ತೋರಿದರು.







ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಇದ್ದರು.






error: Content is protected !!
Scroll to Top