(ನ್ಯೂಸ್ ಕಡಬ) newskadaba.com, ಮೇ.09: ಮುಂಬೈನಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರಮಟ್ಟದ ಕರಾಟೆ ಟೂರ್ನಮೆಂಟ್‌ನಲ್ಲಿ ನೆಲ್ಯಾಡಿಯ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ.ಮುಂಬೈನಲ್ಲಿ ಮೇ 1 ರಿಂದ 3 ರವರೆಗೆ *3ನೇ ಯುಜೆಕೆಎಫ್‌ಐ ರಾಷ್ಟ್ರೀಯ ಓಪನ್ ಕರಾಟೆ ಟೂರ್ನಮೆಂಟ್* ಆಯೋಜಿಸಲಾಗಿತ್ತು.
ಕಾಲೇಜಿನ ಒಟ್ಟು 15 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.ವಿದ್ಯಾರ್ಥಿ ಹಿಶಾಮ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.ಫಾಸಿಲಾ, ಅದ್ವೈತಾ, ಮನೀಶ್ ಹಾಗೂ ಜೈರಾ ಅವರು ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಈ ಐವರು ವಿದ್ಯಾರ್ಥಿಗಳು ಈಗ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕರಾಟೆ ಶಿಕ್ಷಕ ಅಲೋನ್ಸ್ ಅವರ ಸಮರ್ಥ ತರಬೇತಿಯೇ ಕಾರಣವಾಗಿದೆ. ಈ ಐತಿಹಾಸಿಕ ಸಾಧನೆಯನ್ನು ಸಂಸ್ಥೆಯ ಸಂಚಾಲಕ ಹಾಗೂ ಪ್ರಿನ್ಸಿಪಾಲ್ ರೆ. ಫಾ. ಡಾ. ವರ್ಗೀಸ್ ಕೈಪನಡ್ಕ, ಕೋಶಾಧಿಕಾರಿ ಫಾ. ಸ್ಯಾಮುವೆಲ್, ವೈಸ್ ಪ್ರಿನ್ಸಿಪಾಲ್ ಜೋಸ್ ಎಂ.ಜೆ., ಪ್ರೌಢಶಾಲಾ ಮುಖ್ಯ ಶಿಕ್ಷಕ ಜಾರ್ಜ್ ಕೆ. ಥಾಮಸ್ ಮತ್ತು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜೋಸ್ ಪ್ರಕಾಶ್ ಹಾಗೂ ಕಾಲೇಜಿನ ಆಡಳಿತ ಮಂಡಳಿ ಮುಕ್ತಕಂಠದಿಂದ ಶ್ಲಾಘಿಸಿ, ಶುಭ ಹಾರೈಸಿದ್ದಾರೆ.









