ಇಂದಿನ ರಾಜ್ಯದ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com,  ಮೇ.15: ದಕ್ಷಿಣ ಕರ್ನಾಟಕದಲ್ಲಿ ಮೇ 16ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.







ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉ.ಕನ್ನಡದಲ್ಲಿ ಗುಡಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇ 16ರಂದು ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಾಗಲಿದೆ. ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ.






ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

error: Content is protected !!
Scroll to Top