(ನ್ಯೂಸ್ ಕಡಬ) newskadaba.com, ಮೇ.15: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹವಾಮಾನ ವೈಪರಿತ್ಯದ ಪರಿಣಾಮ; ಅರ್ಧ ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ವೈಪರಿತ್ಯದ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್‌ಗೆ ತಾತ್ಕಾಲಿಕ ಅಡಚಣೆ ಉಂಟಾಯಿತು.
ಏರ್‌ಪೋರ್ಟ್ ಸುತ್ತಮುತ್ತ ಮಳೆ ಹಾಗೂ ಕಡಿಮೆ ದೃಶ್ಯಮಾನತೆ ಕಂಡುಬಂದ ಹಿನ್ನೆಲೆ, ಎರಡು ವಿಮಾನಗಳು ಸುಮಾರು ಅರ್ಧ ಗಂಟೆ ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ನಡೆದಿದೆ. ವಿಟ್ಲ ಭಾಗದ ಮೇಲ್ಭಾಗದಲ್ಲಿ ವಿಮಾನಗಳು ತಗ್ಗು ಎತ್ತರದಲ್ಲಿ ಹಾರಾಟ ನಡೆಸಿದ್ದು, ಸ್ಥಳೀಯರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು.
ಹವಾಮಾನದಲ್ಲಿ ಸ್ವಲ್ಪ ಸುಧಾರಣೆ ಕಂಡ ಬಳಿಕ ಎರಡೂ ವಿಮಾನಗಳು ಸುರಕ್ಷಿತವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿವೆ ಎಂದು ತಿಳಿದುಬಂದಿದೆ.ಭಾರೀ ಮಳೆಯ ಹಿನ್ನೆಲೆ ಕರಾವಳಿ ಭಾಗದಲ್ಲಿ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚನೆ ನೀಡಿದೆ.









