ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು – ಹಲವರಿಗೆ ಗಾಯ



(ನ್ಯೂಸ್ಕಡಬ) newskadaba.com ಮೇ.18: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಮಾರುತಿ ಆಲ್ಟೊ ಕಾರೊಂದು ಕಾರ್ಕಳದ ಮುನಿಯಾಲಿನ ರಾಜ್ಯ ಹೆದ್ದಾರಿಯ ಸಮೀಪದ ಚರಂಡಿಗೆ ಮಗುಚಿ ಬಿದ್ದ ಘಟನೆ ಸಂಭವಿಸಿದೆ.







ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಹಾಗೂ ಇಬ್ಬರು ಪುರುಷರು ಸೇರಿ ಒಟ್ಟು ಏಳು ಮಂದಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದರು. ಅನಂತರ ಕ್ರೇನ್ ಸಹಾಯದಿಂದ ಅಪಘಾತಕ್ಕೊಳಗಾದ ಕಾರನ್ನು ಮೇಲಕ್ಕೆತ್ತಲಾಯಿತು. ಘಟನೆಯಲ್ಲಿ ಕಾರು ಜಖಂಗೊಂಡಿದೆ ಎಂದು ತಿಳಿದುಬಂದಿದೆ.






error: Content is protected !!
Scroll to Top