ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೈಟೆಕ್‌ ಟಚ್‌; 1,000ಕ್ಕೂ ಹೆಚ್ಚು ನೂತನ ಕೊಠಡಿಗಳ ನಿರ್ಮಾಣ!



(ನ್ಯೂಸ್ಕಡಬ) newskadaba.com ಮೇ.18: ಸುಬ್ರಹ್ಮಣ್ಯ: ದೇಶದ ಪ್ರಸಿದ್ಧ ನಾಗಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಭಕ್ತರಿಗೆ ಇನ್ನಷ್ಟು ಆಧುನಿಕ ಸೌಲಭ್ಯಗಳನ್ನು ಒದಗಿಸುವ ದಿಸೆಯಲ್ಲಿ ಭಾರೀ ಅಭಿವೃದ್ಧಿಯತ್ತ ಹೆಜ್ಜೆ ಇಡುತ್ತಿದೆ. ಕ್ಷೇತ್ರಕ್ಕೆ ಬರುವ ಲಕ್ಷಾಂತರ ಯಾತ್ರಾರ್ಥಿಗಳ ಅನುಕೂಲಕ್ಕಾಗಿ 1,000ಕ್ಕೂ ಹೆಚ್ಚು ಅತ್ಯಾಧುನಿಕ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ರೂಪಿಸಿದೆ.







ಇದರ ಜೊತೆಗೆ, ಸುಮಾರು ₹77.25 ಕೋಟಿ ವೆಚ್ಚದಲ್ಲಿ ಏಕಕಾಲದಲ್ಲಿ 6,000 ಭಕ್ತರು ಪ್ರಸಾದ ಸ್ವೀಕರಿಸಬಹುದಾದ ‘ಜಿ+2’ ಮಾದರಿಯ ಬೃಹತ್ ಅನ್ನದಾಸೋಹ ಭವನ ನಿರ್ಮಾಣವಾಗಲಿದೆ. ಭಕ್ತರಿಗೆ ಸುಸಜ್ಜಿತ ಹಾಗೂ ವಿಶಾಲ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.






. ಕ್ಷೇತ್ರದ ಸಾಂಪ್ರದಾಯಿಕ ಸೊಬಗು ಉಳಿಸುವ ನಿಟ್ಟಿನಲ್ಲಿ ₹47.5 ಕೋಟಿ ವೆಚ್ಚದಲ್ಲಿ ರಥಬೀದಿ ನವೀಕರಣ ಕಾರ್ಯ ನಡೆಯಲಿದ್ದು, ಪಾರಂಪರಿಕ ಶೈಲಿಯ ವಿನ್ಯಾಸಕ್ಕೆ ಆದ್ಯತೆ ನೀಡಲಾಗುತ್ತದೆ. ಅಲ್ಲದೆ, ₹82 ಕೋಟಿ ವೆಚ್ಚದಲ್ಲಿ ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೂ ಯೋಜನೆ ಸಿದ್ಧಗೊಂಡಿದೆ.

ಈ ಎಲ್ಲಾ ಕಾಮಗಾರಿಗಳು ಲೋಕೋಪಯೋಗಿ ಇಲಾಖೆಯ ಮೂಲಕ ಜಾರಿಯಾಗಲಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ. ಮುಂದಿನ ಎರಡು ವರ್ಷಗಳೊಳಗೆ ಯೋಜನೆಗಳನ್ನು ಪೂರ್ಣಗೊಳಿಸಿ ಭಕ್ತರ ಸೇವೆಗೆ ಮುಕ್ತಗೊಳಿಸುವ ಗುರಿ ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.ಕುಕ್ಕೆ ಕ್ಷೇತ್ರದ ಅಭಿವೃದ್ಧಿಯಿಂದ ಪ್ರವಾಸೋದ್ಯಮ, ಸ್ಥಳೀಯ ವ್ಯಾಪಾರ ಹಾಗೂ ಭಕ್ತರ ಸೌಲಭ್ಯಗಳಿಗೆ ಹೊಸ ಉತ್ತೇಜನ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.

error: Content is protected !!
Scroll to Top