ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗದ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ- ರೂ. 2.50 ಲಕ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ- ರೂ. 1.00 ಲಕ್ಷ. ವಿದ್ಯಾರ್ಥಿಗಳು ವೆಬ್‍ಸೈಟ್ https://shp.karnataka.gov.in/bcwd ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ ಸೈಟ್ https://bcwd.karnataka.gov.in/ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಂಖಾತರ ಅಥವಾ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ/ ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ (ಸಹಾಯವಾಣಿ ಸಂಖ್ಯೆ 8050770004) ಸಂಪರ್ಕಿಸಬಹುದು ಎಂದು ಮಂಗಳೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top