ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು



(ನ್ಯೂಸ್‌ ಕಡಬ) newskadaba.com,  ಮೇ.22: ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು







ಕಡಬ: ಮನೆ ಹಂಚು ತೆಗೆಯುವ ವಿಚಾರ ಹಾಗೂ ಹಳೆಯ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಉಳಿಪು ಎಂಬಲ್ಲಿ ನಡೆದಿದೆ.






ಆರೋಪಿಗಳು ವ್ಯಕ್ತಿಯನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದಲ್ಲದೆ, ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ

error: Content is protected !!
Scroll to Top