(ನ್ಯೂಸ್ ಕಡಬ) newskadaba.com, ಮೇ.27 ಟಿಪ್ಪರ್ ಲಾರಿಯೊಂದು ಸರ್ವಿಸ್ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಹಳೆಯಂಗಡಿಯ ಇಂದಿರಾ ನಗರ ಬಸ್ ನಿಲ್ದಾಣದ ಬಳಿ ಬುಧವಾರ ನಡೆದಿದೆ.
ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರ್ವಿಸ್ ಬಸ್, ಇಂದಿರಾ ನಗರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಡಿಕ್ಕಿಯ ಪರಿಣಾಮವಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸ್ಥಳೀಯ ನಿವಾಸಿಗಳ ಸಹಾಯದಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಮುಕ್ಕದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.









