ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!

(ನ್ಯೂಸ್‌ ಕಡಬ) newskadaba.com,  ಮೇ 28: ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ.

ಹೈಕಮಾಂಡ್ ಸೂಚನೆಯಂತೆ ಅತ್ಯಂತ ಸೌಹಾರ್ದಯುತವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿದ್ದಾರೆ..

ಮುಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವುದು ಬಹುತೇಕ ಖಚಿತವಾಗಿದೆ.

Scroll to Top