(ನ್ಯೂಸ್ ಕಡಬ) newskadaba.com, ಮೇ.29: ರಾಜ್ಯ ರಾಜಕಾರಣದಲ್ಲಿ ಬಹುಚರ್ಚಿತ ನಾಯಕತ್ವ ಬದಲಾವಣೆಗೆ ಅಂತಿಮ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಅವರು ಗುರುವಾರ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಮಧ್ಯಾಹ್ನ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜ್ಯಪಾಲ ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ರಾಜ್ಯದ ಹೊರಗಿರುವುದರಿಂದ, ಅವರ ವಾಪಸಿನ ಬಳಿಕ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಅವರು ಪೂರ್ಣಾವಧಿ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಈ ಬೆಳವಣಿಗೆ ಆಘಾತ ತಂದಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ‘ಅಹಿಂದ’ ನಾಯಕನ ಸ್ಥಾನತ್ಯಾಗ ತಳಮಟ್ಟದ ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದೆ.
ಸಚಿವರೊಂದಿಗೆ ಭಾವುಕ ಉಪಾಹಾರ ಸಭೆ
ರಾಜೀನಾಮೆ ಸಲ್ಲಿಸುವ ಮುನ್ನ ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಸಿದ್ದರಾಮಯ್ಯ ಉಪಾಹಾರ ಸಭೆ ನಡೆಸಿದರು. ಈ ವೇಳೆ ಕಳೆದ ಮೂರು ವರ್ಷದ ಆಡಳಿತದಲ್ಲಿ ಸಹಕರಿಸಿದ ಸಚಿವರಿಗೆ ಧನ್ಯವಾದ ತಿಳಿಸಿದ ಅವರು, ಪಕ್ಷದ ಹೈಕಮಾಂಡ್ ಹಾಗೂ ಅವರ ಸೂಚನೆಯಂತೆ ಈ ನಿರ್ಧಾರ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದರು.
ಸಭೆಯ ವೇಳೆ ಹಲವು ಸಚಿವರು ಭಾವುಕರಾಗಿದ್ದು, ಸಿದ್ದರಾಮಯ್ಯ ಅವರ ಆಡಳಿತ ಶೈಲಿ ಹಾಗೂ ರಾಜಕೀಯ ಹೋರಾಟವನ್ನು ಸ್ಮರಿಸಿದರು…….
ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್
ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಹಾಲಿ ಉಪಮುಖ್ಯಮಂತ್ರಿ ಅವರು ಏರುವುದು ಬಹುತೇಕ ಖಚಿತವಾಗಿದೆ. ಉಪಾಹಾರ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದ ದೃಶ್ಯ ರಾಜಕೀಯ ವಲಯದಲ್ಲಿ ವಿಶೇಷ ಗಮನಸೆಳೆದಿದೆ.
ಶೀಘ್ರದಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಸಭೆ ನಡೆಯಲಿದ್ದು, ಹೊಸ ನಾಯಕರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ದೆಹಲಿ ಸಭೆಗಳ ಬಳಿಕ ಮಹತ್ವದ ನಿರ್ಧಾರ
ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ , ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ನಡೆದ ಸರಣಿ ಚರ್ಚೆಗಳ ಬಳಿಕ ಈ ನಾಯಕತ್ವ ಬದಲಾವಣೆ ಅಂತಿಮಗೊಂಡಿದೆ ಎನ್ನಲಾಗಿದೆ.
ಇದೇ ವೇಳೆ, ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಮಟ್ಟದ ಮಹತ್ವದ ಜವಾಬ್ದಾರಿಯನ್ನು ನೀಡುವ ಕುರಿತು ಕಾಂಗ್ರೆಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ.













