ಇಂದು ಕರ್ನಾಟಕದ ನೂತನ ಸಿಎಂ ಆಯ್ಕೆ: CLP ಸಭೆಗೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್



(ನ್ಯೂಸ್‌ ಕಡಬ) newskadaba.com,  ಮೇ.30: ಸಿಎಂ ಹುದ್ದೆಯಿಂದ ನಿರ್ಗಮಿಸುವ ಮುನ್ನ ಇಂದು ಸಿದ್ದರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ದೂರುಗಳನ್ನು ಸ್ವೀಕರಿಸಿದರು.







ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ‘ಕಾವೇರಿ’ ನಿವಾಸಕ್ಕೆ ಕಾಂಗ್ರೆಸ್ ಶಾಸಕರು ಮತ್ತು ಪ್ರಮುಖ ನಾಯಕರು ಇಂದು ಅಪರಾಹ್ನ ಸಿಎಲ್ಪಿ ಸಭೆಗೆ ಮುನ್ನ ಭೇಟಿ ನೀಡುತ್ತಿದ್ದಾರೆ. ನಾಯಕರಾದ ಕೆ.ಜೆ. ಜಾರ್ಜ್, ಎ.ಎಸ್. ಪೊನ್ನಣ್ಣ, ಪುಟ್ಟರಂಗಶೆಟ್ಟಿ ಹಾಗೂ ಬಿಲ್ಕೀಸ್ ಬಾನು ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.






ರಾಜ್ಯಪಾಲರ ಜೊತೆ ಭೇಟಿಯಾಗಿ ಮಾತುಕತೆ ನಡೆಸಿದ ಡಿಕೆಶಿ

ಇಂದು ಬೆಳಗ್ಗೆ ಲೋಕಭವನದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ ಕೆ ಸುರೇಶ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕಾರದ ತಾತ್ಕಾಲಿಕ ವೇಳಾಪಟ್ಟಿ ಹಾಗೂ ರಾಜ್ಯಪಾಲರ ಲಭ್ಯತೆ ಕುರಿತು ಚರ್ಚಿಸಿದ್ದಾರೆ. ಜೂನ್ 1, 3, ಮತ್ತು 5— ಮೂರು ಪರ್ಯಾಯ ದಿನಾಂಕಗಳನ್ನು ಪ್ರಸ್ತಾಪಿಸಲಾಗಿದ್ದು, ರಾಜ್ಯಪಾಲರ ಲಭ್ಯತೆ ನೋಡಿಕೊಂಡು ನಿರ್ಧರಿಸಲಾಗುವುದು ಎನ್ನಲಾಗುತ್ತಿದೆ.

ಸಚಿವ ಸ್ಥಾನಕ್ಕೆ ಲಾಬಿ ತೀವ್ರ: ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಹಲವರು ದೆಹಲಿಯಲ್ಲಿ ಬೀಡು

ಕರ್ನಾಟಕದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಹಲವಾರು ಶಾಸಕರು ಮತ್ತು ನಾಯಕರು ಸಚಿವ ಸ್ಥಾನ ಪಡೆಯಲು ಕಾಂಗ್ರೆಸ್ ಹೈಕಮಾಂಡ್‌ ಮುಂದೆ ಮನವಿ ಸಲ್ಲಿಸುವ ಉದ್ದೇಶದಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.

ಹೊಸ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ಹಿನ್ನೆಲೆಯಲ್ಲಿ, ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಆಕಾಂಕ್ಷಿಗಳು ಕಾಂಗ್ರೆಸ್ ನಾಯಕತ್ವದ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಬಹುತೇಕ ಖಚಿತವಾಗಿರುವ ಸಂದರ್ಭದಲ್ಲಿ, ಸಚಿವ ಸಂಪುಟದ ರಚನೆ ಮತ್ತು ಖಾತೆಗಳ ಹಂಚಿಕೆ ಕುರಿತು ಪಕ್ಷದೊಳಗೆ ಚರ್ಚೆಗಳು ಜೋರಾಗಿವೆ

error: Content is protected !!
Scroll to Top